Webdunia - Bharat's app for daily news and videos

Install App

ಚಾಮರಾಜೇಶ್ವರ ರಥಕ್ಕೆ ಬೆಂಕಿ; ಇಂದು ಚಾಮರಾಜನಗರ ಬಂದ್

Webdunia
ಸೋಮವಾರ, 20 ಫೆಬ್ರವರಿ 2017 (10:40 IST)
ನಗರದ ಪುರಾಣ ಪ್ರಸಿದ್ಧ ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಕಿಡಗೇಡಿಗಳು ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಇಂದು ನಗರ ಬಂದ್‌ಗೆ ಕರೆ ನೀಡಲಾಗಿದೆ.
ನಿನ್ನೆ ನಡೆದ ಅ ದೇವಾಲಯದ ಆವರಣದಲ್ಲಿ ಸಭೆ ಸೇರಿದ್ದ ಭಕ್ತ ಮಂಡಳಿ, ಇಂದು ಚಾಮರಾಜನಗರ ಬಂದ್ಗೆ ಕರೆ ನೀಡಿತ್ತು. ಇಂದು ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದಲ್ಲಿ ಬಂದ್ ಘೋಷಿಸಲಾಗಿದೆ. 
 
ರಥಕ್ಕೆಹಚ್ಚಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ದೇವಸ್ಥಾನಕ್ಕೆ ಸರ್ಕಾರ ನೂತನ ರಥವನ್ನು ನಿರ್ಮಿಸಿಕೊಡಬೇಕು ಎಂದು ಭಕ್ತ ಮಂಡಳಿ ಒತ್ತಾಯಿಸಿದೆ.
 
ಶನಿವಾರ - ಭಾನುವಾರ ನಡುವಿನ ರಾತ್ರಿ 1 ಗಂಟೆ ಸುಮಾರಿಗೆ ಚಾಮರಾಜೇಶ್ವರ ರಥಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ದೇವಸ್ಥಾನದ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯಾವಳಿಗಳು ಸೆರೆಯಾಗಿದ್ದು , ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
 
ನಗರದಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments