Select Your Language

Notifications

webdunia
webdunia
webdunia
webdunia

ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Srinivas Prasadh

Sampriya

ಬೆಂಗಳೂರು , ಮಂಗಳವಾರ, 23 ಏಪ್ರಿಲ್ 2024 (14:27 IST)
Photo Courtesy X
ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್‌ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಸದ್ಯ ಐಸಿಯು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  

ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ. ನಂತರ ವಾರ್ಡ್‌ಗೆ ಶಿಫ್ಟ್ ಮಾಡಲಾಗುವುದು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಸುದರ್ಶನ್ ಬಲ್ಲಾಳ್‌ ತಿಳಿಸಿದ್ದಾರೆ.

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಶ್ರೀನಿವಾಸದ ಪ್ರಸಾದ್, ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2013 ರಿಂದ 2016 ರವರೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯ ಗಳಿಸಿದ್ದಾರೆ.

ಶ್ರೀನಿವಾಸ್ ಪ್ರಸಾದ್​ ಇತ್ತೀಚೆಗಷ್ಟೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮಧ್ಯೆ, ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್‌ ಸೇರಿದ್ದರು. ಇದು ಚಾಮರಾಜನಗರ ರಾಜಕೀಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯಪ್ರಿಯರೇ, ನಾಳೆಯಿಂದ ಬೆಂಗಳೂರಿನಲ್ಲಿ ಮದ್ಯ ಸಿಗಲ್ಲ