Publish Date: Fri, 27 Oct 2023 (18:44 IST)
Updated Date: Fri, 27 Oct 2023 (19:09 IST)
ನಾಳೆ ಚಂದ್ರ ಗ್ರಹಣ ಹಿನ್ನೆಲೆ ರಾಜ್ಯದ ಕೆಲ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜಾ, ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮೈಸೂರು ಚಾಮುಂಡೇಶ್ವರಿ ದೇಗುಲ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳ ಸಮಯ ಬದಲಾವಣೆ ಮಾಡಲಾಗಿದೆ.
ನಾಳೆ ಸಂಜೆ 6ರ ಬಳಿಕ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ರಾಹು ಗ್ರಸ್ತ ಚಂದ್ರ ಗ್ರಹಣ ಎಂದು ಹೇಳಲಾಗುವ ಚಂದ್ರ ಗ್ರಹಣವು ನಾಳೆ ರಾತ್ರಿ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣ. ಹೀಗಾಗಿ ಪ್ರಸಿದ್ಧ ದೇವಸ್ಥಾನಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರ ಶನಿವಾರ ಸಂಜೆ 6ರ ಬಳಿಕ ನಾಡ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.