ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

Sampriya
ಗುರುವಾರ, 4 ಸೆಪ್ಟಂಬರ್ 2025 (18:08 IST)
Photo Credit X
ಮೈಸೂರು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಭಾರೀ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮಣಿಯದೇ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದೆ.

ಈ ಮಧ್ಯೆ ಇಂದು ಮೈಸೂರಿನ ಶ್ರೀಕ್ಷೇತ್ರ ಚಾಮುಂಡಿಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ನೀಡಿ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿ. ಸೋಮಣ್ಣ, ನಂಬಿಕೆ, ಭಕ್ತಿ ಮತ್ತು ಇತಿಹಾಸಕ್ಕೆ ಮತ್ತೊಂದು ಹೆಸರೇ ಚಾಮುಂಡಿ ಬೆಟ್ಟ. ಸರ್ಕಾರವು ಉದ್ಘಾಟಕರಿಗೆ ತಾಯಿ ಚಾಮುಂಡಿ ಇತಿಹಾಸ, ಉತ್ಸವ, ಆರಾಧನೆ, ಸಂಪ್ರದಾಯವನ್ನು ಮೊದಲು ತಿಳಿಸಿ ಹೇಳಬೇಕು. 

ಇದೀಗ ಉದ್ಘಾಟಕರಾಗಿ ಆಯ್ಕೆಯಾಗಿರುವವರು, ಈ ಸ್ಥಾನಕ್ಕೆ ಅರ್ಹರೋ ಅಥವಾ ಇಲ್ಲವೋ ಎಂಬ ಚರ್ಚೆ ಮಾಡುವುದಿಲ್ಲ ಎಂದರು.

ಮೈಸೂರಿನ ಶ್ರೀಕ್ಷೇತ್ರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಪ್ರತಾಪ್‌ ಸಿಂಹ ಅವರು, ಶಾಸಕರಾದ ಶ್ರೀವತ್ಸ ಅವರು ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪದೇ ಪದೇ ಎಡವಟ್ಟು ಮಾಡುತ್ತಿದೆ. ಸರ್ಕಾರ ಯಾರನ್ನೋ ತೃಪ್ತಿಪಡಿಸುವ ಕೆಲಸ ಮಾಡುವುದು ಸರಿಯಲ್ಲ. ಚಾಮುಂಡಿ ತಾಯಿಯ ಮನಸ್ಸು ಗೆಲ್ಲುವ ಕೆಲಸ ಮಾಡಿದರೆ ದೇಶ ಮತ್ತು ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ದಸರಾ ಉದ್ಘಾಟಕರು ನಮ್ಮ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಲಿ ಎಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments