Publish Date: Thu, 04 May 2023 (17:50 IST)
Updated Date: Thu, 04 May 2023 (17:35 IST)
ಇಂದು ಕಲಬುರಗಿಗೆ ಚುನಾವಣೆ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಡುತ್ತಿದ್ದು, ಜೇವರ್ಗಿ ಮತ್ತು ಅಫಜಲಪುರದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಜೇವರ್ಗಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಸಂಜೆ 5.30ಕ್ಕೆ ಅಫಜಲಪುರದಲ್ಲಿ ಸಭೆ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ಬಳಿಕ ರಾತ್ರಿ ಕಲಬುರಗಿ ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಇಂದು ಕನಕಪುರ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಕೇಂದ್ರ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ಮುಂದೂಡಿಕೆಯಾಗಿದೆ. ಮೇ 8ರಂದು ಕನಕಪುರದಲ್ಲಿ ಅಮಿತ್ ಶಾ ಪ್ರಚಾರ ಸಾಧ್ಯತೆ ಇದೆ.