ನಾಳೆ ಮೈಸೂರಿಗೆ ಚಾಣಕ್ಯ ಭೇಟಿ

geetha
ಶನಿವಾರ, 10 ಫೆಬ್ರವರಿ 2024 (21:00 IST)
ಮೈಸೂರು-ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಂಬಂಧ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಈ ವೇಳೆ ಪಕ್ಷದ ಸಂಘಟನೆ ಕುರಿತಂತೆ ಸಭೆಗಳನ್ನೂ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ಕುರಿತಂತೆ ಮುಂದಿನ ರಣತಂತ್ರ ರೂಪಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವ ಚಾಣಕ್ಯ ಅಮಿತ್ ಶಾ ಅವರು ಭಾನುವಾರ ಮೈಸೂರಿನಲ್ಲಿ ರಾಜ್ಯ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ಕಮಿಟಿ ಸಭೆ ನಡೆಸಲಿದ್ದಾರೆ.
 
ವಾಸ್ತವವಾಗಿ ಈ ಭೇಟಿ ವೇಳೆ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿ ಪಕ್ಷ ಸಭೆಗಳನ್ನು ನಡೆಸುವುದು ಈ ಮೊದಲು ನಿರ್ಧಾರವಾಗಿತ್ತು. ಬಳಿಕ ಸಮಯದ ಅಭಾವದ ಕಾರಣ ಬದಲಾವಣೆ ಮಾಡಲಾಯಿತು. ಇದೀಗ ಭಾನುವಾರ ಮೈಸೂರಿನಲ್ಲೇ ಪಕ್ಷದ ಸಭೆಗಳನ್ನು ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.
 
ಆ ಪ್ರಕಾರ, ಭಾನುವಾರ ಮಧ್ಯಾಹ್ನ 3 ಗಂಟೆಗೆ ಮೈಸೂರು, ಚಾಮರಾಜನಗರ, ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ ಮೈಸೂರು ಕ್ಲಸ್ಟರ್ ನ ಪಕ್ಷದ ಬೂತ್ ಅಧ್ಯಕ್ಷರು ಹಾಗೂ ಪ್ರಮುಖ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅಮಿತ್ ಶಾ ಅವರು ಮಾತನಾಡಲಿದ್ದಾರೆ. ಸುಮಾರು ಹತ್ತು ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

IPL 2026: ಕೊನೆಗೂ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಗುವಾಹಟಿಯ ಸರುಸಜೈಯಲ್ಲಿ ಭವ್ಯ ರೋಡ್‌ ಶೋ ನಡೆಸಿದ ಪ್ರಧಾನಿ ಮೋದಿ

ಮಧ್ಯಪ್ರದೇಶದಲ್ಲಿ ಇಂದಿಗೂ ಶುದ್ಧ ನೀರು ಸಿಗುತ್ತಿಲ್ಲ: ರಾಹುಲ್ ಗಾಂಧಿ ಕಿಡಿ

ತಮಿಳುನಾಡು ವಿಧಾನಸಭೆ ಚುನಾವಣೆ, ಮಹಿಳೆಯರ ಹಾಗೇ ಪುರುಷರಿಗೂ ಫ್ರೀ ಬಸ್‌ ಘೋಷಿಸಿದ AIADMK

ರಾಜ್ಯದಲ್ಲಿ ಕಾನೂನು ಹೇಗಿದೆ ಎಂಬುದಕ್ಕೇ ಈ ರಕ್ತಸಿಕ್ತ ಘಟನೆ ಸಾಕ್ಷಿ

ಮುಂದಿನ ಸುದ್ದಿ
Show comments