Publish Date: Wed, 17 Aug 2022 (21:20 IST)
Updated Date: Wed, 17 Aug 2022 (21:22 IST)
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ಗುಜರಾತ್, ರಾಜಸ್ಥಾನ್, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ.ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಆಗಸ್ಟ್ 17 ರಂದು ದಕ್ಷಿಣ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಸೌರಾಷ್ಟ್ರ ಮತ್ತು ಕಛ್ ಪ್ರದೇಶಗಳಲ್ಲಿ ಆಗಸ್ಟ್ 17 ಮತ್ತು ಆಗಸ್ಟ್ 18 ರ ನಡುವೆ ಮಳೆಯಾಗಬಹುದು. ಇದೇ ವೇಳೆ ಗೋವಾ ಮತ್ತು ಕೊಂಕಣ ಪ್ರದೇಶಗಳಲ್ಲಿ ಇದೇ 20ರವರೆಗೆ ಮಳೆಯಾಗಬಹುದು. ಮುಂದಿನ ಮೂರು ದಿನಗಳ ಕಾಲ ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.