Select Your Language

Notifications

webdunia
webdunia
webdunia
webdunia

ನಾಳೆಯಿಂದ ಮಳೆಯಾಗುವ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ನಾಳೆಯಿಂದ ಮಳೆಯಾಗುವ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ
bangalore , ಸೋಮವಾರ, 21 ನವೆಂಬರ್ 2022 (19:32 IST)
ಕರ್ನಾಟಕದಲ್ಲಿ ಅಬ್ಬರಿಸಿದ ಮಳೆರಾಯ ಕಳೆದ 1 ವಾರದಿಂದ ಶಾಂತಗೊಂಡಿದ್ದ. ಚಳಿಯ ನಡುವೆಯೇ ಬೆಂಗಳೂರಿನಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಂಗಳವಾರದಿಂದ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ, ಚಳಿ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯ ಮುನ್ಸೂಚನೆಯಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಎರಡನೆ ದಿನಕ್ಕೆ ಕಾಲಿಟ್ಟ ಕಡಲೇಕಾಯಿ ಪರಿಷೆ