ಬೆಂಗಳೂರು: ಇಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
									
			
			 
 			
 
 			
					
			        							
								
																	ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
									
										
								
																	ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಕೂಡ ಮಳೆಯಾಗಲಿದೆ.
									
											
							                     
							
							
			        							
								
																	ಶನಿವಾರ ಚಿಟಗುಪ್ಪ, ಉಡುಪಿ, ಹುಮನಾಬಾದ್, ಪಣಂಬೂರು, ಮಂಠಾಳ, ಮಾಣಿ, ಕೆಂಭಾವಿ, ಟಿಕ್ಕೋಟ, ಮೂಲ್ಕಿ, ಭಾಲ್ಕಿ, ವಿಜಯಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಿದೆ.