Publish Date: Thu, 19 Oct 2023 (15:49 IST)
Updated Date: Thu, 19 Oct 2023 (15:56 IST)
ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 19 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯೆಲ್ಲೊಅಲರ್ಟ್ ನೀಡಿದೆ. ಅ.20ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ನೀಡಲಾಗಿದೆ. ಇನ್ನು ಉಳಿದಂತೆ ಅಕ್ಟೋಬರ್ 20ರಂದು ಕರಾವಳಿಯಲ್ಲಿ ಸಾಧಾರಣ ಹಾಗೂ ಅ.21ರಂದು ಅತಿ ಸಾಧಾರಣ ಮಳೆಯಾಗುವ ಸಂಭಧಿವಧಿವಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಅತಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.