Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ನ.1ರಿಂದ 5 ದಿನ ಮಳೆ ಸಾಧ್ಯತೆ

ರಾಜ್ಯದಲ್ಲಿ ನ.1ರಿಂದ 5 ದಿನ ಮಳೆ ಸಾಧ್ಯತೆ
bangalore , ಭಾನುವಾರ, 30 ಅಕ್ಟೋಬರ್ 2022 (16:14 IST)
ಕರ್ನಾಟಕದಲ್ಲಿ ಹಿಂಗಾರು ಮಾರುತಗಳೂ ಈ ವರ್ಷ ಮಳೆ ಸುರಿಸುವ ಸಾಧ್ಯತೆಯಿದೆ. ರಾಜ್ಯದ ತುಮಕೂರು, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ನಿನ್ನೆಯಿಂದಲೇ ರಾಜ್ಯದ ಹಲವೆಡೆ ಮೋಡ ಕವಿದ ವಾತಾವಣವಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಬೆಂಗಳೂರಿನಲ್ಲಿಯೂ ನಿನ್ನೆಯಿಂದ ಅಲ್ಲಲ್ಲಿ ಮಳೆಯಾಗಿದ್ದು, ನ 2ರಿಂದ ಐದು ದಿನಗಳ ಕಾಲ ಮಳೆ ವ್ಯಾಪಕವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷವೂ ದೀಪಾವಳಿಯ ನಂತರ ಮಳೆ ಕಡಿಮೆಯಾಗಿ ಚಳಿ ಹೆಚ್ಚಾಗುವುದು ವಾಡಿಕೆ. ಈ ವರ್ಷ ತಾಪಮಾನ ಕುಸಿದು ಚಳಿ ಹೆಚ್ಚಾದರೂ ಮಳೆ ಕಡಿಮೆಯಾಗಿಲ್ಲ. ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮುಂಗಾರು ಮತ್ತು ಅಕ್ಟೋಬರ್​ನಿಂದ ಹಿಂಗಾರು ಆರಂಭವಾಗುವುದು ವಾಡಿಕೆ. ಆದರೆ ಈ ವರ್ಷ ಹಿಂಗಾರು ಅಕ್ಟೋಬರ್ ತಿಂಗಳ ಕೊನೆಯ ಭಾಗದಲ್ಲಿ ಆರಂಭವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗುವಿಗೆ ಜನ್ಮ ನೀಡಿದ 7 ತಿಂಗಳಿಂದ ಕೋಮಾದಲ್ಲಿದ್ದ ಮಹಿಳೆ!