Select Your Language

Notifications

webdunia
webdunia
webdunia
webdunia

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಕೊಲೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಕೊಲೆ
ಹುಬ್ಬಳ್ಳಿ , ಮಂಗಳವಾರ, 5 ಜುಲೈ 2022 (14:19 IST)
ಹುಬ್ಬಳ್ಳಿ: ಸರಳ ವಾಸ್ತು ಗುರೂಜಿ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ್ ಗುರೂಜಿಯವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ವಾಸ್ತವ್ಯವಿದ್ದ ಚಂದ್ರಶೇಖರ್ ಗುರೂಜಿ ಬಳಿಗೆ ಭಕ್ತರ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಸುಮಾರು 50 ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾರೆ.

ಭಕ್ತರ ಸೋಗಿನಲ್ಲಿ ಬಂದಿದ್ದ ಇಬ್ಬರು ಗುರೂಜಿಯನ್ನು ಹೋಟೆಲ್ ಆವರಣಕ್ಕೆ ಕರೆತಂದಿದ್ದರು. ಬಳಿಕ ಓರ್ವ ಕಾಲಿಗೆ ನಮಸ್ಕಾರ ಮಾಡಿದ್ದು, ಇದೇ ವೇಳೆ ಇನ್ನೋರ್ವ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಇಬ್ಬರೂ ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ.

ಯಾರೋ ಚಂದ್ರಶೇಖರ್ ಗುರೂಜಿಯವರಿಂದ ಸಲಹೆ ಪಡೆದು ನಷ್ಟ ಅನುಭವಿಸಿದ್ದರು. ಇವರೇ ಈ ಕೃತ್ಯವೆಸಗಿದ್ದಾರೆ ಎಂದು ಶಂಕಿಸಲಾಗಿದೆ. ಇದೀಗ ಪೊಲೀಸರು ಹಂತಕರಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಹಕ್ಕೆ ಕೊಚ್ಚಿ ಹೋದ ಚೀನಾ!