Select Your Language

Notifications

webdunia
webdunia
webdunia
webdunia

ಚಂದ್ರು ಹತ್ಯೆ ಪ್ರಕರಣ ಸಿಐಡಿ ತನಿಖೆ: ಸಿಎಂ ಬೊಮ್ಮಾಯಿ

chandru bengaluru karnataka basavaraja bommai ಬಸವರಾಜ ಬೊಮ್ಮಾಯಿ ಚಂದ್ರು ಕರ್ನಾಟಕ
bengaluru , ಭಾನುವಾರ, 10 ಏಪ್ರಿಲ್ 2022 (14:19 IST)

ಬೆಂಗಳೂರಿನ ಜೆಜೆ ನಗರದಲ್ಲಿ ನಡೆದ ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರು ಹತ್ಯೆ ಪ್ರಕರಣದ ಕುರಿತು ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಸಿಐಡಿಗೆ ತನಿಖೆ ವಹಿಸಲಾಗಿದೆ ಎಂದರು.

ಪೊಲೀಸ್ ಕಮಿಷನರ್ ಮತ್ತು ಡಿಐಜಿ ಜೊತೆ ಚರ್ಚೆ ನಡೆಸಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಲು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ಹೇಳಿದರು.

ಚಂದ್ರು ಹತ್ಯೆ ಪ್ರಕರಣದ ಬಗ್ಗೆ ಪೊಲೀಸ್ ಕಮಿಷನರ್ ಕಮಲ್ ಪಂತ್, ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಹತ್ಯೆಯಾದ ಚಂದ್ರು ಸ್ನೇಹಿತ ಸೈಮನ್ ರಾಜ್ ಭಿನ್ನ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾಕಷ್ಟು ಗೊಂದಲ, ಟೀಕೆ ವ್ಯಕ್ತವಾಗಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನದ ಮುಂದಿನ ಪ್ರಧಾನಿ ಶೆಹಬಾಜ್ ಷರೀಫ್?