Publish Date: Sun, 29 May 2022 (14:34 IST)
Updated Date: Sun, 29 May 2022 (15:03 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಈ ಬಗ್ಗೆ ಮಾತನಾಡಿ, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ತೋರಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.