Select Your Language

Notifications

webdunia
webdunia
webdunia
webdunia

ಸಿಎಂ ಬದಲಾವಣೆ, ಸುಮ್ಮನೇ ಡ್ರಾಮಾ ಕಂಪನಿ ಓಪನ್ ಮಾಡಕ್ಕೆ ಇಷ್ಟವಿಲ್ಲ: ಜಿ ಪರಮೇಶ್ವರ್‌

ಕರ್ನಾಟಕ ಮುಖ್ಯಮಂತ್ರಿ ವಿಚಾರ

Sampriya

ಬೆಂಗಳೂರು , ಗುರುವಾರ, 10 ಜುಲೈ 2025 (17:25 IST)
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಂದರ್ಭ ಎದುರಾದಗ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗುರುವಾರ ಹೇಳಿದರು. 

ನಾಯಕತ್ವ ಬದಲಾವಣೆ ಚರ್ಚೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ವಿಶ್ಲೇಷಣೆ ಮಾಡಿದಂತೆ ಇದೊಂದು ಡ್ರಾಮಾ. ನಿಮ್ಮ ಹೇಳಿಕೆಯನ್ನು ನಾನು ಒಪ್ಪಬೇಕಾಗುತ್ತೆ. ಪದೇ ಪದೇ ಇದರ ಬಗ್ಗೆ ಚರ್ಚೆ ಆಗುವುದು, ಅವರೊಂದು ಹೇಳಿಕೆ ಕೊಡುವುದು ನಾನೊಂದು ಹೇಳೋದು, ಮತ್ತೊಬ್ಬರು ಒಂದು ಹೇಳೋದು ಆಗಬಾರದು ಎಂದರು.

ಆಡಳಿತ ಪಕ್ಷದಲ್ಲಿ ಯಾವುದೇ ರೀತಿಯ ತೊಂದರೆ ಇಲ್ಲ. ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಈ ವಿಚಾರವಾಗಿ ಸುಮ್ಮನೇ ಡ್ರಾಮಾ ಕಂಪನಿ ಓಪನ್ ಮಾಡಲು ನನಗೆ ಇಷ್ಟವಿಲ್ಲ ಎಂದರು. 

ನಾನು ಸ್ಮೂತ್ ಆಗೇ ಇರೋದು, ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟ ಇಲ್ಲ. ಅದನ್ನ ಬಿಟ್ಟುಬಿಡೋಣ, ನಮ್ಮ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಾರೆ. ಸಂದರ್ಭ ಬಂದಾಗ ತೀರ್ಮಾನ ಮಾಡುತ್ತಾರೆ ಎಂದು ಪರಮೇಶ್ವರ್ ಪುನರುಚ್ಚರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಬೇಹುಗಾರಿಕಾ ದಳ ಕೋಮಾ ಸ್ಥಿತಿಗೆ ತಲುಪಿದೆಯೇ: ಸಿ.ಟಿ.ರವಿ