ವಿಚ್ಛೇದನ ಮಹಿಳೆಗೆ ಮೋಸ

Webdunia
ಸೋಮವಾರ, 7 ಫೆಬ್ರವರಿ 2022 (15:42 IST)
ವಿಚ್ಛೇತ ಮಹಿಳೆಯನ್ನು ಪುಸಲಾಯಿಸಿ ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ಸಂಪರ್ಕ ಬೆಳೆಸಿ ಕೊಂಡು ಮೋಸ ಮಾಡಿರುವ ವ್ಯಕ್ತಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಂದಿರಾನಗರದ 30 ವರ್ಷದ ನೊಂದ ಮಹಿಳೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
 
ಕೌಟುಂಬಿಕ ಕಲಹದಿಂದಾಗಿ ಪತಿಗೆ ವಿಚ್ಛೇಧನ ನೀಡಿದ್ದ ಮಹಿಳೆ ಇಬ್ಬರು, ಮಕ್ಕಳೊಂದಿಗೆ ಇಂದಿರಾನಗರದಲ್ಲಿ ಪ್ರತ್ಯೇಕ ವಾಸವಾಗಿದ್ದಾರೆ.
ಜೀವನ ನಿರ್ವಹಣೆಗಾಗಿ ಆ ಮಹಿಳೆ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅದೇ ಕಂಪನಿಯಲ್ಲಿ ಕೆಲಸ ಮಾಡುವ ವ್ಯಕ್ತಿಯ ಪರಿಚಯವಾಗಿದೆ.
 
ಈ ವ್ಯಕ್ತಿ ಆ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡು ಪ್ರೀತಿಸುವ ನಾಟಕವಾಡಿ ವಿವಾಹವಾಗುವುದಾಗಿ ನಂಬಿಸಿ ಸಂಪರ್ಕ ಬೆಳೆಸಿದ್ದಾನೆ. ತದನಂತರ ಮದುವೆ ವಿಚಾರ ಬಂದಾಗಲೆಲ್ಲ ಒಂದೊಂದು ಸಬೂಬು ಹೇಳುತ್ತಾ ನುಣುಚಿಕೊಳ್ಳುತ್ತಿದ್ದ.
 
2020, ಡಿಸೆಂಬರ್ 10ರಂದು ಸಬ್‍ರಿಜಿಸ್ಟಾರ್ ಕಚೇರಿಯಲ್ಲಿ ವಿವಾಹಕ್ಕೆ ಸಿದ್ದತೆ ಮಾಡಿಕೊಂಡಾಗಲೂ ನೆಪ ಹೇಳಿ ದಿನಾಂಕ ಮುಂದೂಡಿದ್ದ.
ತದನಂತರವೂ ಸಂಪರ್ಕ ಬೆಳೆಸಿಕೊಂಡಿದ್ದ ವ್ಯಕ್ತಿ ತನಗೆ ವಂಚಿಸಿದ್ದಾನೆ ಎಂದು ನೊಂದ ಮಹಿಳೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿ ರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments