Publish Date: Sun, 17 Dec 2017 (19:50 IST)
Updated Date: Sun, 17 Dec 2017 (19:52 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ಮಾಣ ಮಾಡಲಾಗಿದ್ದ ಹೆಲಿಪ್ಯಾಡ್‌ನ ಭದ್ರತಾ ಸಿಬ್ಬಂದಿಯೊಂದಿಗೆ ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ವಾಗ್ವಾದ ನಡೆಸಿರುವ ಆರೋಪ ಕೇಳಿಬಂದಿದೆ.
ಗುರುಮಿಠಕಲ್‌ನ ವ್ಯಾಪ್ತಿಯಲ್ಲಿನ ಹೆಲಿಪ್ಯಾಡ್‌ನಲ್ಲಿ ಈ ಘಟನೆ ನಡೆದಿದ್ದು, ಭದ್ರತಾ ಸಿಬ್ಬಂದಿ ಮೇಲೆ ಬಾಬುರಾವ ಚಿಂಚನಸೂರ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೆಲಿಪ್ಯಾಡ್ ಹತ್ತಿರ ಜನರು ಹೋಗದಂತೆ ಸಿಬ್ಬಂದಿ ತಡೆದ ಕಾರಣಕ್ಕೆ ಚಿಂಚನಸೂರ ಅವರ ಅಸಮಾಧಾನಗೊಂಡು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.