Webdunia - Bharat's app for daily news and videos

Install App

ಪ್ರತಿಭಟನೆಯನ್ನು ಕೈಬಿಟ್ಟ ಪೊಲೀಸರಿಗೆ ಸಿಎಂ.ಪರಮೇಶ್ವರ್ ಅಭಿನಂಧನೆ

Webdunia
ಶನಿವಾರ, 4 ಜೂನ್ 2016 (16:14 IST)
ರಾಜ್ಯ ಸರಕಾರದ ಮನವಿಗೆ ಸ್ಪಂದಿಸಿ ಪ್ರತಿಭಟನೆಯನ್ನು ಕೈಬಿಟ್ಟ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಲಾಖೆ ಪರವಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ದಾರೆ. 
 
ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್, ಸರಕಾರದ ಕರೆಗೆ ಗೌರವಕೊಟ್ಟು ಇಂದು ಎಲ್ಲ ಪೊಲೀಸರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸರಕಾರದ ಮನವಿಗೆ ಸ್ಪಂದಿಸಿದ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂದು ರಾಜ್ಯದಲ್ಲಿ ಒಂದೆರಡು ಕಡೆ ಪ್ರತಿಭಟನೆ ನಡೆದಿದೆ. ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ಅವರ ಪತ್ನಿ ಪೂರ್ಣಿಮಾ, ವಾಟಾಳ್ ನಾಗರಾಜ್ ರು ಪ್ರತಿಭಟನೆಯಲ್ಲಿ ತೊಡಗಿದ್ದರು ಅವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. 
 
ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ಅವರು ರಾಜ್ಯದಲ್ಲಿ ಸಿಪಾಯಿ ದಂಗೆ ಮಾಡುತ್ತೇವೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅವರನ್ನು ಬಂಧನ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
 
ನಮ್ಮ ಸರಕಾರ ರಾಜ್ಯ ಪೊಲೀಸರಿಗೆ ನಿರಾಶೆ ಮಾಡುವುದಿಲ್ಲ. ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ. ಅವರು ನಮ್ಮ ಸರಕಾರದ ಮೇಲೆ ಇಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಪೊಲೀಸರ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.
 
ನಮ್ಮ ಮನವಿಯನ್ನು ಪೊಲೀಸರಿಗೆ ತಲುಪಿಸುವ ಮಾದ್ಯಮ ಮಿತ್ರರಿಗೂ ನಾನು ಅಭಾರಿಯಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಮುಂದಿನ ಸುದ್ದಿ
Show comments