Select Your Language

Notifications

webdunia
webdunia
webdunia
webdunia

ಪೊಲೀಸ್ ಸಮಾವೇಶದಲ್ಲಿ ಸಿಬ್ಬಂದಿಗೆ ಮುಖ್ಯಮಂತ್ರಿ ಬೊಮ್ಮಾಯಿ ಖಡಕ್ ಸೂಚನೆ!

ಪೊಲೀಸ್ ಸಮಾವೇಶದಲ್ಲಿ ಸಿಬ್ಬಂದಿಗೆ ಮುಖ್ಯಮಂತ್ರಿ ಬೊಮ್ಮಾಯಿ ಖಡಕ್ ಸೂಚನೆ!
ಬೆಂಗಳೂರು , ಮಂಗಳವಾರ, 7 ಸೆಪ್ಟಂಬರ್ 2021 (13:16 IST)
ಬೆಂಗಳೂರು, ಸೆ. 07 : "ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆ ಅತ್ಯಂತ ದಕ್ಷ, ನಿಷ್ಪಕ್ಷಪಾತ ಹಾಗೂ ನಿಷ್ಠುರವಾಗಿದ್ದು, ಈ ಪರಂಪರೆಯನ್ನು ಮುಂದುವರೆಸಬೇಕು. ಆಗ ಮಾತ್ರ ಜನಸಾಮಾನ್ಯರಿಗೆ ಸುರಕ್ಷತೆ ಹಾಗೂ ಆತ್ಮಸ್ಥೈರ್ಯ ನೀಡಲು ಸಾಧ್ಯ. ಕಾನೂನು ಸುವ್ಯವಸ್ಥೆಯ ಜೊತೆಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಜನರ ಸೇವೆ ಮಾಡಲು ಪೊಲೀಸರಿಗೆ ಅಧಿಕಾರವನ್ನು ನೀಡಲಾಗಿದೆ. ಈ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡುವ ಗುರುತರ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.
ಬಹಳ ವರ್ಷಗಳ ನಂತರ ಮೊದಲ ಬಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಳೆದ ಎರಡು ವರ್ಷಗಳಲ್ಲಿ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ. ವಿಧಿವಿಜ್ಞಾನ ಪ್ರಯೋಗಾಲಯಗಳು, ನೇಮಕಾತಿ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ದೌರ್ಜನ್ಯ; ಸರ್ಕಾರದ ನಡೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ಷೇಪ!