Publish Date: Tue, 07 Jun 2022 (11:29 IST)
Updated Date: Tue, 07 Jun 2022 (11:23 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಮುಖಂಡ ಹಾಗೂ ನಟ ಮುಖ್ಯಮಂತ್ರಿ ಚಂದ್ರು ಇದೀಗ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.
ಆಮ್ ಆದ್ಮಿ ಪಾರ್ಟಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.
ನಾಡಿನ ಸಜ್ಜನ ಗಣ್ಯರ ಆಮ್ ಆದ್ಮಿ ಪಾರ್ಟಿ ಸೇರ್ಪಡೆ ಪರ್ವ ಮುಂದುವರಿದಿದೆ. ಈಗ ಖ್ಯಾತ ನಟ ಹಾಗೂ ವಿಧಾನಸಭೆ, ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆಯಾಗುತ್ತಿದ್ದಾರೆ.