Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ

webdunia
ಪಶ್ಚಿಮ ಬಂಗಾಳ , ಮಂಗಳವಾರ, 30 ಆಗಸ್ಟ್ 2022 (16:55 IST)
ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯಗಳ ದಾಳಿಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದಲ್ಲಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ಪಕ್ಷದ ವಿದ್ಯಾರ್ಥಿ ಘಟಕದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಬಂಗಾಳದಲ್ಲಿ ಸಿಬಿಐ, ಇ.ಡಿ ಮತ್ತು ಇತರ ಕೇಂದ್ರದ ಅಧಿಕಾರಿಗಳ ವಿರುದ್ಧವೂ ನನ್ನ ಬಳಿ ಪ್ರಕರಣಗಳಿವೆ. ಹೀಗಾಗಿ, ನೀವು ನನ್ನ ಅಧಿಕಾರಿಗಳನ್ನು ದೆಹಲಿಗೆ ಕರೆದರೆ, ನಾನು ನಿಮ್ಮ ಅಧಿಕಾರಿಗಳನ್ನು ಇಲ್ಲಿಗೆ ಕರೆಸುತ್ತೇನೆ' ಎಂದು ಹೇಳಿದರು.'ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಕನಿಷ್ಠ ಎಂಟು ಪ್ರಕರಣಗಳಿವೆ. ಅವರು ಸಿಬಿಐ ಮೂಲಕ ನಮ್ಮ ಜನರನ್ನು ಬಂಧಿಸಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮುಂದಿನ 3 ದಿನ ಮಳೆ