ಬೆಂಗಳೂರಿನ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಮಂತ್ರಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ಬಾರಿ ಫಲಶೃತಿ ಇದಾಗಿದ್ದು. ಗಣೇಶ ಚತುರ್ಥಿ ಹಬ್ಬದಂದು ಸಚಿವರಾಗುವ ಭಾಗ್ಯ ಕೃಷ್ಣಪ್ಪ ಅವರಿಗೆ ದೊರೆಕಿದೆ. ಸಂಜೆ 4:30ಕ್ಕೆ ಎಂ.ಕೃಷ್ಣಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಂಪುಟ ವಿಸ್ತರಣೆ ಸಮಯದಲ್ಲಿ ವಂಚಿತರಾಗಿದ್ದ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದ್ದಾರೆ. ಇಂದು ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಂ. ಕೃಷ್ಣಪ್ಪ ಪ್ರಮಾಣ ವಚನವನ್ನು ರಾಜ್ಯಪಾಲ ವಜುಬಾಯಿ ವಾಲಾ ಪ್ರಮಾಣ ವಚನ ಬೋಧಿಸಲಿದ್ದಾರೆ.
ವಸತಿ ಸಚಿವ ಅಂಬರೀಶ್ ಅವರನ್ನು ಸಂಪುಟದಿಂದ ಕೈ ಬಿಟ್ಟಿದ್ದರಿಂದ ಒಕ್ಕಲಿಗ ಸಮುದಾಯದ ಕೋಟಾದಡಿ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ದೊರೆಯುತ್ತಿದೆ. ಕಳೆದ ಬಾರಿ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಕೈತಪ್ಪಿದಾಗ ಅವರ ಬೆಂಬಲಿಗರು ವಿಜಯನಗರ ಸುತ್ತಮುತ್ತ ಭಾರಿ ಪ್ರತಿಭಟನೆ ನಡೆಸಿದ್ದರು. ಈ ಮಧ್ಯೆ ಕೃಷ್ಣಪ್ಪ ಅವರಿಗೆ ವಸತಿ ಮತ್ತು ವಾರ್ತಾ ಖಾತೆ ನೀಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ಸ್ವತಂತ್ರ ನಿರ್ವಹಣೆಯೊಂದಿಗೆ ರಾಜ್ಯ ದರ್ಜೆ ಸಚಿವರಾಗಿರುವ ವಿನಯ್ ಕುಲಕರ್ಣಿ ಮತ್ತು ಎ. ಮಂಜು ಅವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆ. ಈ ಸಂಬಂಧ ಅಧಿಸೂಚನೆ ಹೊರಬೀಳಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ