Select Your Language

Notifications

webdunia
webdunia
webdunia
webdunia

ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ಉದ್ಯೋಗ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ಉದ್ಯೋಗ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
bangalore , ಶನಿವಾರ, 1 ಜುಲೈ 2023 (19:16 IST)

ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು.ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ಥೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

SC/ST,PTCL ಕಾಯ್ದೆ ಭೂಮಿ ವಂಚಿತರ ಹೋರಾಟ