Publish Date: Thu, 17 Aug 2017 (15:30 IST)
Updated Date: Thu, 17 Aug 2017 (15:32 IST)
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದುರಹಂಕಾರ ಬಂದಿದೆ. ಹಣಬಲದಿಂದ ಮುಂಬರುವ ಚುನಾವಣೆ ಗೆಲ್ಲುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಸಿಎಂ, ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು, ಗುಂಡ್ಲುಪೇಟೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು 100 ಕೋಟಿ ಖರ್ಚುಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ನನ್ನನ್ನು ಬಹಳ ಮೃದು ಸ್ವಭಾವದವರು ಎಂದು ತಿಳಿದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸ್ವೇಚ್ಚಾಚಾರ, ಹಣ ಲೂಟಿ ವಿರುದ್ಧ ಮೃದು ಧೋರಣೆ ತಾಳುವುದಿಲ್ಲ. ಸರಕಾರದ ವಿರುದ್ಧ ಹೋರಾಟ ಖಚಿತ ಎಂದು ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಮಾಡಿದ್ದೇವೆ ಎಂದು ಪುಟಗಟ್ಟಲೆ ಜಾಹೀರಾತು ನೀಡಿದ್ದಾರೆ. ಆದರೆ, ಯಾವುದೇ ರೀತಿಯಲ್ಲೂ ಬೆಂಗಳೂರು ಅಭಿವೃದ್ಧಿಯಾಗಿಲ್ಲ. ಕೇವಲ ಜಾಹೀರಾತಿನಲ್ಲಿ ಮಾತ್ರ ಅಭಿವೃದ್ಧಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.