ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ಆಕಾಶವಾಣಿ ಕೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ.
ನಾಳೆ ಸಂಜೆ 7.45-8.42ರ ಸಮಯದವರೆಗೂ ನಡೆಯಲಿರುವ ಆಕಾಶವಾಣಿ ನೇರ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರ್ವಜನಿಕರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.
ನಾಳೆ ನಡೆಯುವ ನೇರ ಸಂವಾದದಲ್ಲಿ 080-22370477, 080-22360488, 080-2237048 ದೂರವಾಣಿ ಸಂಖ್ಯೆ ಮೂಲಕ ಸಾರ್ವಜನಿಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸರಕಾರದ ಯೋಜನೆ, ಕಾರ್ಯವೈಖರಿಯ ಕುರಿತು ಪ್ರಶ್ನೆ ಕೇಳಬಹುದಾಗಿದೆ.
ಪಾರದರ್ಶಕ ಆಡಳಿತ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಸರಕಾರದ ಆಡಳಿತ, ಕಾರ್ಯವೈಖರಿಗೆ ಸಂಬಂಧಿಸಿದಂತೆ ನೀಡುವ ಸಲಹೆ ಸೂಚನೆಯನ್ನು ಮುಖ್ಯಮಂತ್ರಿಯವರು ಆಲಿಸಲಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.