Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಸಿದ್ದರಾಮಯ್ಯ ತೊಘಲಕ್ ದರ್ಬಾರ ನಡೆಸುತ್ತಿದ್ದಾರೆ: ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ತೊಘಲಕ್ ದರ್ಬಾರ ನಡೆಸುತ್ತಿದ್ದಾರೆ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು , ಭಾನುವಾರ, 26 ಜೂನ್ 2016 (14:27 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ತೊಘಲಕ್ ದರ್ಬಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಯಲಹಂಕಾ ಕ್ಷೇತ್ರದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ತೊಘಲಕ್ ದರ್ಬಾರ ನಡೆಸುತ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬೇಡ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ. 
 
ನೀವೆನಾದ್ರೂ ಕಿತ್ತಾಡಿಕೊಳ್ಳಿ ಆದರೆ ರಾಜ್ಯದ ಅಭಿವೃದ್ಧಿಯತ್ತ ಗಮನ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ಧರಾಮಯ್ಯನವರಲ್ಲಿ ಮನವಿ ಮಾಡಿದ್ದಾರೆ.
 
ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳುವುದು ಸತ್ಯಕ್ಕೆ ದೂರವಾಗಿದೆ. ಕೇಂದ್ರ ಸಚಿವ ಸದಾನಂದ ಗೌಡ ಅವರಿಗೆ ಪಕ್ಷದ ಕುರಿತು ಯಾವುದೇ ಅಸಮಾಧಾನವಿಲ್ಲ. ಆದರೆ, ಪರಿಷತ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಲ್ಲಿ ಅಸಮಾಧಾನವಿದೆ. ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯನವರಿಗೆ ಸಿಹಿ ಮುತ್ತಿನ ಭಾಗ್ಯ!