ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಭಾರೀ ಕಸರತ್ತು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಸಿದ್ದರಾಮ
ಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ಭೇಟಿಯಾಗಿದ್ದಾರೆ. ಸಿಎಂ ಕುರ್ಚಿಗೆ ಗುದ್ದಾಟ ನಡೆಯುವಾಗಲೇ ಈ ಭೇಟಿ ಮಹತ್ವ ಪಡೆದಿದೆ.
ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಖರ್ಗೆ ನಿವಾಸದಿಂದ ಹೊರಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈಕಮಾಂಡ್ ನಿರ್ಧಾರವನ್ನು ನಾನೂ ಒಪ್ಪಬೇಕು ಹಾಗೂ ಶಿವಕುಮಾರ್ ಇಬ್ಬರೂ ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬರೀ ಊಹಾಪೋಹ. ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಪಕ್ಷ ಸಂಘಟನೆ ಬಗ್ಗೆ ಮಾತಾಡಿದೆ. ಮುಂದಿನ ಚುನಾವಣೆ ತಯಾರಿ ಬಗ್ಗೆ ಚರ್ಚೆಯೂ ನಡೆಯಿತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಖರ್ಗೆ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಹಿರಿಯರ ಸಲಹೆ, ಮಾರ್ಗದರ್ಶನ ಅವಶ್ಯಕತೆ ಇದೆಯೋ ಆಗ ನಾನು ಭೇಟಿ ಮಾಡುವೆ ಎಂದಿದ್ದಾರೆ.