ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

Sampriya
ಭಾನುವಾರ, 23 ನವೆಂಬರ್ 2025 (10:11 IST)
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಭಾರೀ ಕಸರತ್ತು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಸಿದ್ದರಾಮ
Photo Credit X
ಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ಭೇಟಿಯಾಗಿದ್ದಾರೆ. ಸಿಎಂ ಕುರ್ಚಿಗೆ ಗುದ್ದಾಟ ನಡೆಯುವಾಗಲೇ ಈ ಭೇಟಿ ಮಹತ್ವ ಪಡೆದಿದೆ.

ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಖರ್ಗೆ ನಿವಾಸದಿಂದ ಹೊರಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈಕಮಾಂಡ್‌ ನಿರ್ಧಾರವನ್ನು ನಾನೂ ಒಪ್ಪಬೇಕು ಹಾಗೂ ಶಿವಕುಮಾರ್‌ ಇಬ್ಬರೂ ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬರೀ ಊಹಾಪೋಹ. ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಪಕ್ಷ ಸಂಘಟನೆ ಬಗ್ಗೆ ಮಾತಾಡಿದೆ. ಮುಂದಿನ ಚುನಾವಣೆ ತಯಾರಿ ಬಗ್ಗೆ ಚರ್ಚೆಯೂ ನಡೆಯಿತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಖರ್ಗೆ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಹಿರಿಯರ ಸಲಹೆ, ಮಾರ್ಗದರ್ಶನ ಅವಶ್ಯಕತೆ ಇದೆಯೋ ಆಗ ನಾನು ಭೇಟಿ ಮಾಡುವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಮುಂದಿನ ಸುದ್ದಿ
Show comments