Select Your Language

Notifications

webdunia
webdunia
webdunia
webdunia

ದಾಖಲೆ 17ನೇ ಬಾರಿ ಬಜೆಟ್‌ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭ

Siddaramaiah
ಬೆಂಗಳೂರು: ದಾಖಲೆಯ 17ನೇ ಬಾರಿ ರಾಜ್ಯದ ಬಜೆಟ್‌ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಯಾರಿ ಆರಂಭಿಸಿದ್ದಾರೆ. ಮುಂದಿನ ತಿಂಗಳು ಬಕೆಟ್‌ ಮಂಡಿಸುವ ಸಾಧ್ಯತೆಯಿದೆ.

ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ. ವಿಧಾನ ಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಈ ಕಾರ್ಯಕ್ಕೆ ಕೈಹಾಕಿದ್ದಾರೆ. 

ಮುಂದಿನ ಸಾಲಿನ‌ ಆಯವ್ಯಯದ ಪೂರ್ವಭಾವಿ ಸಭೆಯ ಭಾಗವಾಗಿ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಇಂದು ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. 

ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಸಭೆಗೆ ಬರಲು ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ