ವಿದ್ಯಾರ್ಥಿ ವೇದಾಂತ್ ಹೇಳಿಕೆ ತಿರುಚಿ ಕಾಂಗ್ರೆಸ್‌ನಿಂದ ಚೀಫ್‌ ಪಾಲಿಟಿಕ್ಸ್: ಬಿಜೆಪಿ ಕಿಡಿ

Sampriya
ಗುರುವಾರ, 11 ಏಪ್ರಿಲ್ 2024 (16:20 IST)
ಬಾಗಲಕೋಟೆ:  ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವೇದಾಂತ್ ಹೇಳಿಕೆಯನ್ನು ತಿರುಚಿ ಕಾಂಗ್ರೆಸ್ ಕೆಳಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಿಡಿಕಾರಿದೆ.

ಬಾಗಲಕೋಟೆಯ ಜಮಖಂಡಿ ಮೂಲದ ವಿದ್ಯಾರ್ಥಿ ವೇದಾಂತ್‌ ಜ್ಞಾನೋಬಾ ನಾವಿ ಅವರು ಪಿಯುಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದರು. ಮಾಧ್ಯಮಗಳ ಮುಂದೆ ಮಾತನಾಡಿ ವೇದಾಂತ್ ನನ್ನ ವಿದ್ಯಾಭ್ಯಾಸಕ್ಕೆ ಮೋದಿ ಸರ್ಕಾರದ ಫಸಲ್ ಬಿಮಾ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿಕೊಂಡಿದ್ದರು. ಅದನ್ನು ಕಟ್ ಮಾಡಿ ಕಾಂಗ್ರೆಸ್ ಗ್ಯಾರಂಟಿಗಳಿಂದಲೇ ರ್ಯಾಂಕ್ ಬಂದಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಅದಲ್ಲದೆ ಈ ವಿಡಿಯೋವನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಶೇರ್ ಮಾಡಿ ನಮ್ಮ ಗ್ಯಾರಂಟಿಯ ಹಣದ ಪ್ರಯೋಜವಾಗಿದೆ ಎಂದು ಹೇಳಿಕೊಂಡಿದ್ದರು.  ಕಾಂಗ್ರೆಸ್‌ನ ಕೀಳುಮಟ್ಟದ ರಾಜಕೀಯಕ್ಕೆ  ಬಿಜೆಪಿ ಛೀಮಾರಿ ಹಾಕಿದೆ.

ಈ ಬಗ್ಗೆ ಕರ್ನಾಟಕ ಬಿಜೆಪಿಯ ಎಕ್ಸ್‌ ಖಾತೆಯಲ್ಲಿ ಬರೆಯಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ರ‍್ಯಾಂಕ್‌ ಪಡೆದುಕೊಂಡ ವೇದಾಂತ್ ಹೇಳಿಕೆಯನ್ನು ಬಳಸಿಕೊಂಡು @INCKarnataka
 ಇದೆಂಥಾ ಚೀಪ್ ಪೊಲಿಟಿಕ್ಸ್ ಮಾಡುತ್ತಿದೆ ನೋಡಿ.

ವೇದಾಂತ್ ಪ್ರಧಾನ ಮಂತ್ರಿ ಶ್ರೀ @narendramodi
 ಅವರ ಸರ್ಕಾರದ ಫಸಲ್ ಬಿಮಾ ಯೋಜನೆಯ ಕುರಿತು ಅದರಿಂದ ಆದ ಅನುಕೂಲದ ಬಗ್ಗೆ ವಿವರಿಸಿದ್ದರೆ, ಅದನ್ನು ಕಟ್ ಮಾಡಿ ಕಾಂಗ್ರೆಸ್ ಗ್ಯಾರಂಟಿಗಳಿಂದಲೇ ರ‍್ಯಾಂಕ್‌ ಬಂದಿದೆ ಎಂದು ಬಿಂಬಿಸಿಕೊಳ್ಳುತ್ತಿದೆ ಮಜಾವಾದಿ ಸರ್ಕಾರ.

ವೇದಾಂತ್‌ಗೆ ಅಭಿನಂದನೆ ಸಲ್ಲಿಸಬೇಕಾದ @siddaramaiah
 ಅವರು ಕೂಡ, ಐಟಿ ಸೆಲ್ ಕೊಟ್ಟ ವಿಡಿಯೋ ಬಳಸಿ ಟೂಲ್ ಕಿಟ್ ಪ್ರಚಾರ ಪಡೆದುಕೊಳ್ಳುತ್ತಿರುವುದು ನಾಚಿಕೆಗೇಡು!<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments