ಚಿಕ್ಕೋಡಿ: ಕಾರಿನಲ್ಲಿ ಭಸ್ಮವಾದ ಉದ್ಯಮಿ

Sampriya
ಬುಧವಾರ, 2 ಅಕ್ಟೋಬರ್ 2024 (15:43 IST)
Photo Courtesy X
ಚಿಕ್ಕೋಡಿ (ಬೆಳಗಾವಿ): ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ ಜೇವರ್ಗಿ ರಾಜ್ಯ ಹೆದ್ದಾರಿ ಪಕ್ಕ ಕಾರಿನಲ್ಲಿ ಸುಟ್ಟು ಭಸ್ಮವಾದ ರೀತಿಯಲ್ಲಿ ಉದ್ಯಮಿಯ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಇಲ್ಲಿನ ಮುಲ್ಲಾ ಪ್ಲಾಟ್‌ ನಿವಾಸಿ, ಗ್ರಾನೈಟ್‌ ಉದ್ಯಮಿ ಫೈರೋಜ್ ಬಡಗಾಂವಿ (40) ಎಂದು ಗುರತಿಸಲಾಗಿದೆ.  ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಚಾಲಕನ ಸೀಟಿನಲ್ಲಿ ಕುಳಿತಿದ್ದ ಫೈರೋಜ್‌ ಕೂಡ ಬೆಂದುಹೋಗಿದ್ದಾರೆ. ಈ ಘಟನೆ ಮಂಗಳವಾರ ತಡರಾತ್ರಿ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಹಗಲು ರಾತ್ರಿ ನಿರಂತರವಾಗಿ ವಾಹನ ಓಡಾಟ ನಡೆಸುವ ಸ್ಥಳದಲ್ಲಿ ಬೆಂಕಿಯನ್ನು ಯಾರೂ ಏಕೆ ಗಮನಿಸಿಲ್ಲ ಎಂಬುದು ಇದೀಗ ಸಂದೇಹಕ್ಕೆ ಕಾರಣವಾಗಿದೆ. ಬುಧವಾರ ಮಧ್ಯಾಹ್ನ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಕೂಡ ಭೇಟಿ ನೀಡಿ ಪರಿಶೀಲಿಸಿದರು.

ಮೇಲ್ನೋಟಕ್ಕೆ ಅಪಘಾತವಾಗಿ ಬೆಂಕಿ ಹೊತ್ತಿಕೊಂಡಂತೆ ಕಾಣುತ್ತಿದೆ. ಆದರೂ ಸಾವು ಅನುಮಾನಾಸ್ಪದವಾಗಿದೆ. ಮೃತನ ಕುಟುಂಬದವರ ದೂರು ಆಧರಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments