Publish Date: Tue, 18 Oct 2022 (07:07 IST)
Updated Date: Mon, 17 Oct 2022 (23:15 IST)
ಶಿವಮೊಗ್ಗ : ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ತೀರ್ಪು ನೀಡಿದೆ.
ಜಿಲ್ಲೆಯ ಭದ್ರಾವತಿಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ರಾಘವೇಂದ್ರ (27) ಮೂರು ವರ್ಷದ ಮಗು ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.