ರಾಜ್ಯದಲ್ಲಿ 14 ವರ್ಷದೊಳಗಿನ 10.12 ಲಕ್ಷ ಮಕ್ಕಳು ಶಾಲೆ ಮತ್ತು ಅಂಗನವಾಡಿಯಿಂದ ಹೊರಗುಳಿದಿದ್ದಾರೆ ಎಂಬ ಆತಂಕಕಾರಿ ವರದಿಯನ್ನು ವಿವಿಧ ಇಲಾಖೆಗಳು ಹೈಕೋರ್ಟ್ಗೆ ಸಲ್ಲಿಸಿವೆ. ರಾಜಧಾನಿ ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಡುತ್ತಿರುವ 534 ಮಕ್ಕಳು ಹಾಗೂ ವ್ಯಾಪಾರದಲ್ಲಿ ತೊಂಡಗಿಕೊಂಡಿರುವ 186 ಮಕ್ಕಳು ಸೇರಿದಂತೆ ಒಟ್ಟು 720 ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದನ್ನು ಬಿಬಿಎಂಪಿ ಗುರುತಿಸಿದೆ. ಮಕ್ಕಳನ್ನು ಆಕರ್ಷಿಸಲು ಶಿಕ್ಷಣ ಇಲಾಖೆ ಸಂಪೂರ್ಣ ವಿಫಲವಾಗುತ್ತಿದ್ದು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ರವರು ಈ ಬಗ್ಗೆ ಜಾಣಕುರುಡು ತೋರುತ್ತಿದ್ದಾರೆ. ನಾಗೇಶ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿ, ಸಚಿವ ಸಂಪುಟದಿಂದ ವಜಾ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ ಇದಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಆಗ್ರಹಿಸಿದ್ದಾರೆ.