Webdunia - Bharat's app for daily news and videos

Install App

ಮಕ್ಕಳು ಶಾಲೆ ಬಿಟ್ಟು ಭಿಕ್ಷಾಟನೆ: ಸಚಿವ ನಾಗೇಶ್ ರಾಜೀನಾಮೆಗೆ ಎಎಪಿ ಆಗ್ರಹ

Webdunia
ಶನಿವಾರ, 9 ಜುಲೈ 2022 (19:19 IST)
ರಾಜ್ಯದಲ್ಲಿ 14 ವರ್ಷದೊಳಗಿನ 10.12 ಲಕ್ಷ ಮಕ್ಕಳು ಶಾಲೆ ಮತ್ತು ಅಂಗನವಾಡಿಯಿಂದ ಹೊರಗುಳಿದಿದ್ದಾರೆ ಎಂಬ ಆತಂಕಕಾರಿ ವರದಿಯನ್ನು ವಿವಿಧ ಇಲಾಖೆಗಳು ಹೈಕೋರ್ಟ್ಗೆ ಸಲ್ಲಿಸಿವೆ. ರಾಜಧಾನಿ ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಡುತ್ತಿರುವ 534 ಮಕ್ಕಳು ಹಾಗೂ ವ್ಯಾಪಾರದಲ್ಲಿ ತೊಂಡಗಿಕೊಂಡಿರುವ 186 ಮಕ್ಕಳು ಸೇರಿದಂತೆ ಒಟ್ಟು 720 ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದನ್ನು ಬಿಬಿಎಂಪಿ ಗುರುತಿಸಿದೆ. ಮಕ್ಕಳನ್ನು ಆಕರ್ಷಿಸಲು ಶಿಕ್ಷಣ ಇಲಾಖೆ ಸಂಪೂರ್ಣ ವಿಫಲವಾಗುತ್ತಿದ್ದು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ರವರು ಈ ಬಗ್ಗೆ ಜಾಣಕುರುಡು ತೋರುತ್ತಿದ್ದಾರೆ. ನಾಗೇಶ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿ, ಸಚಿವ ಸಂಪುಟದಿಂದ ವಜಾ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ ಇದಕ್ಕೆ  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments