ಕಾಂಗ್ರೆಸ್, ಖರ್ಗೆ ವಿರುದ್ಧ ಚಿಂಚನಸೂರ ವಾಗ್ದಾಳಿ

Webdunia
ಮಂಗಳವಾರ, 16 ಅಕ್ಟೋಬರ್ 2018 (15:58 IST)
ಕಾಂಗ್ರೆಸ್ ನಿಂದ ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ನನ್ನ ಸೋಲಿಸಿ ಅಂತ ಹೇಳಿದವರು ಈಗ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಯವರನ್ನು ಸೋಲಿಸಿ ಎಂದು ಹೇಳಬೇಕೆಂದು ಮಾಜಿ ಸಚಿವ ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಗುರುಮಠಕಲ್ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದ್ದಾಗ ಕೆಲ ಕಾಂಗ್ರೆಸ್ ನಾಯಕರೇ ಚಿಂಚನಸೂರ ಅವರನ್ನು ಸೋಲಿಸಿ ಅಂತ ಹೇಳಿದ್ದರು. ಈಗ ಲೋಕಸಭಾ ಚುನಾವಣಾ ಹತ್ತಿರ ಬರುತ್ತಿದ್ದು ಆಗ ನನ್ನ ವಿರುದ್ಧ ಹೇಳಿದವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ‌ಸೋಲಿಸಬೇಕು ಅಂತ ಹೇಳಬೇಕೆಂದು ಕೈ ನಾಯಕರಿಗೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಾಬುರಾವ್ ಚಿಂಚನಸೂರು ಸವಾಲು ಹಾಕಿದರು.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಹಮ್ಮಿಕೊಂಡ ಲೋಕಸಭಾ ಚುನಾವಣೆ ವಿಶೇಷ ಸಭೆಯಲ್ಲಿ ಭಾಗವಹಿಸಿ ಚಿಂಚನಸೂರ ಮಾತನಾಡಿದರು. ನಾನು ದೀಪದಂತೆ ನನ್ನ ಮೈಯಿ ಸುಟ್ಟುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಿ ಬೆಳಕು ನೀಡುವ ಕೆಲಸ ಮಾಡಿದ್ದೇನೆ ಎಂದರು. ಮೈತ್ರಿ ಸರಕಾರ ಶೀಘ್ರ ಪತನವಾಗಲಿದ್ದು ಯಾದಗಿರಿ ಬಿಜೆಪಿ ಶಾಸಕ ಶೀಘ್ರ ಸಚಿವರಾಗಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments