Select Your Language

Notifications

webdunia
webdunia
webdunia
webdunia

ಚೀನಾ ಅಧ್ಯಕ್ಷರ ಸಹಾಯಕನಿಗೆ ಭದ್ರತಾ ಪಡೆ ತಡೆ

Chinese President
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ದೇಶಗಳ ನಾಯಕರು ಭಾಗಿಯಾಗಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಆಫ್ರಿಕಾದ ಉಪಾಧ್ಯಕ್ಷರನ್ನು ಭೇಟಿ ಮಾಡಲು ಅತಿಥಿ ಗೃಹಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ಚೀನಾ ಅಧ್ಯಕ್ಷರ ಜತೆಗೆ ಬಂದಿದ್ದ ಸಹಾಯಕರೊಬ್ಬರನ್ನು ಹಾಲ್​​​ ಪ್ರವೇಶಿಸದಂತೆ ಭದ್ರತಾ ಅಧಿಕಾರಿಗಳು ತಡೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಕ್ಸಿ ಜಿನ್‌ಪಿಂಗ್ ಸಭಾಂಗಣದ ಕಡೆಗೆ ಹೋಗುತ್ತಿರುವುದನ್ನು ಕಾಣಬಹುದು. ಚೀನಾದ ಪ್ರಧಾನಿ ಸಭಾಂಗಣಕ್ಕೆ ಪ್ರವೇಶಿಸುತ್ತಿದ್ದಂತೆ, ಅವರ ಸಹಾಯಕರೊಬ್ಬರು ಕೂಡ ಅವರ ಹಿಂದೆ ಓಡಿಕೊಂಡು ಬರುತ್ತಾರೆ. ಆದರೆ ಆಫ್ರಿಕಾ ಭದ್ರತಾ ಪಡೆ ಸಿಬ್ಬಂದಿ ಅವರನ್ನು ತಡೆದಿದ್ದಾರೆ. ಈ ಸಮಯದಲ್ಲಿ ಅಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಒಂದು ಬಾರಿ ಗೊಂದಲಕ್ಕೆ ಒಳಗಾಗುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಿ20 ಶೃಂಗ ಸಭೆ: ನಿಷೇಧಾಜ್ಞೆ ಜಾರಿ