Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

Krishnaveni K
ಗುರುವಾರ, 5 ಜೂನ್ 2025 (19:38 IST)
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಈಗ ಆರ್ ಸಿಬಿ ಫ್ರಾಂಚೈಸಿ ಮತ್ತು ಕೆಎಸ್ ಸಿಎ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆ ಮೂಲಕ ಗೆದ್ದ ಖುಷಿಯಲ್ಲಿದ್ದ ಆರ್ ಸಿಬಿಗೆ ದೊಡ್ಡ ಶಾಕ್ ಎದುರಾಗಿದೆ.

ನಿನ್ನೆ ಆರ್ ಸಿಬಿ ಆಟಗಾರರು ಬೆಂಗಳೂರಿಗೆ ಬಂದು ಸಂಭ್ರಮಾಚರಣೆ ಮಾಡುವ ಹಿನ್ನಲೆಯಲ್ಲಿ ಚಿನ್ನಸ್ವಾಮಿ ಮೈದಾನಕ್ಕೆ ಏಕಾಏಕಿ ಲಕ್ಷಾಂತರ ಜನ ನುಗ್ಗಿದ್ದರು. ಈ ವೇಳೆ ಕಾಲ್ತುಳಿತವಾಗಿ 11 ಮಂದಿ ಸಾವನ್ನಪ್ಪಿದ್ದರೆ ಹಲವರಿಗೆ ಗಾಯಗಳಾಗಿತ್ತು. ಹೀಗಾಗಿ ಸಂಭ್ರಮವಾಗಿದ್ದ ಸಮಾರಂಭಕ್ಕೆ ಸೂತಕದ ಛಾಯೆ ಆವರಿಸಿತು.

ಘಟನೆ ಬಗ್ಗೆ ಈಗ ನಾನಾ ಆರೋಪಗಳು-ಪ್ರತ್ಯಾರೋಪಗಳು ನಡೆಯುತ್ತಿವೆ. ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೇ ಇರುವುದು ಘಟನೆಗೆ ಕಾರಣ ಎಂದು ವಿಪಕ್ಷಗಳು ಹೇಳುತ್ತಿದ್ದರೆ ಇನ್ನೊಂದೆಡೆ ಕೆಎಸ್ ಸಿಎ ಮತ್ತು ಆರ್ ಸಿಬಿ ಮೈದಾನಕ್ಕೆ ಉಚಿತ ಪ್ರವೇಶ ಘೋಷಿಸಿದ್ದೇ ಅನಾಹುತಕ್ಕೆ ಕಾರಣ ಎನ್ನಲಾಗುತ್ತಿದೆ.

ಇದೀಗ ಘಟನೆ ಬಗ್ಗೆ ಡಿಸಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸಿಎಂ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಕೆಎಸ್ ಸಿಎ ಮತ್ತು ಆರ್ ಸಿಬಿ ಫ್ರಾಂಚೈಸಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಪೊಲೀಸರ ಅನುಮತಿ ಪಡೆಯದೇ ಕೆಎಸ್ ಸಿಎ ಮತ್ತು ಆರ್ ಸಿಬಿ ವಿಕ್ಟರಿ ಪೆರೇಡ್ ಬಗ್ಗೆ ಘೋಷಣೆ ಮಾಡಿದ್ದೇ ಅನಾಹುತಕ್ಕೆ ಕಾರಣ ಎಂಬ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments