Webdunia - Bharat's app for daily news and videos

Install App

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Sampriya
ಶನಿವಾರ, 7 ಜೂನ್ 2025 (14:52 IST)
Photo Courtesy X
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದರಾಜ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೊಕ್‌ ನೀಡಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 

ರಾಜ್ಯ ಸರ್ಕಾರಕ್ಕೆ ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು ಎಂದು ಅವರು ಲೇವಡಿ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅಂತ ಐವರನ್ನು ತರಾತುರಿಯಲ್ಲಿ ಅಮಾನತು ಮಾಡಿದ್ದು ಸರಿಯಲ್ಲ. ಅಮಾನತು ಅವಶ್ಯಕತೆ ಇರಲಿಲ್ಲ. ಸರ್ಕಾರ ಈ ರೀತಿ ತೀರ್ಮಾನ ಮಾಡಿದ್ರೆ ಅಧಿಕಾರಿಗಳು ಕೆಲಸ ಮಾಡೋಕೆ ಆಗುವುದಿಲ್ಲ ಎಂದು ಜರಿದಿದ್ದಾರೆ.

ಕಾಲ್ತುಳಿತ ಪ್ರಕರಣದ ಸಂಪೂರ್ಣ ಜವಾಬ್ದಾರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ತೆಗೆದುಕೊಳ್ಳಬೇಕು. ಇದರಲ್ಲಿ 3 ಜನರದ್ದು ತಪ್ಪಿದೆ. ಏಕಾಏಕಿ 24 ಗಂಟೆ ಒಳಗೆ ಸನ್ಮಾನ ಮಾಡೋದು ಏನಿತ್ತು? ಸನ್ಮಾನವನ್ನು ಸರಿಯಾಗಿ ಮಾಡಿದ್ರಾ? ಆಟಗಾರರನ್ನ ಸರಿಯಾಗಿ ನಡೆಸಿಕೊಂಡ್ರಾ? ಎಂದು ಪ್ರಶ್ನಿಸಿದ್ದಾರೆ.

ನೀವು ಕೊಟ್ಟ ಶಾಲು, ಟೋಪಿ ಎಲ್ಲಾ ಅವರು ತಗೊಂಡು ಹೋದ್ರಾ, ಬಿಸಾಕಿ ಹೋದ್ರಾ ಗೊತ್ತಿಲ್ಲ. ಇದಕ್ಕೆ ತರಾತುರಿಯಲ್ಲಿ ಕಾರ್ಯಕ್ರಮ ಬೇಕಿತ್ತಾ? ಜವಾಬ್ದಾರಿ ತಗೊಂಡೋರು ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ತಪ್ಪುಗಳನ್ನ ಮುಚ್ಚಿಕೊಳ್ಳೋಕೆ ಅಧಿಕಾರಿಗಳ ತಲೆದಂಡ ಮಾಡೋದು ಸರಿಯಲ್ಲ. ಹೀಗೆ ಮಾಡಿದ್ರೆ ಅವರು ಹೇಗೆ ಶ್ರದ್ಧೆಯಿಂದ ಕೆಲಸ ಮಾಡೋಕೆ ಸಾಧ್ಯ? ಸರ್ಕಾರ ಇದನ್ನ ಯೋಚನೆ ಮಾಡಬೇಕಿತ್ತು ಎಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಮುಂದಿನ ಸುದ್ದಿ
Show comments