Webdunia - Bharat's app for daily news and videos

Install App

ಚರ್ಚ್‌ಸ್ಟ್ರೀಟ್ ಪ್ರಕರಣ: ಇಬ್ಬರ ಬಂಧನ

Webdunia
ಶುಕ್ರವಾರ, 27 ಫೆಬ್ರವರಿ 2015 (09:22 IST)
ನಗರದ ಚರ್ಚ್‍ಸ್ಟ್ರೀಟ್‌ನಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಬಿಹಾರದ ಪಾಟ್ನಾ ಜೈಲಿನಲ್ಲಿರುವ ಇಬ್ಬರು ಉಗ್ರರನ್ನು ನಗರ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರುತ್ತಿದ್ದು ವಿಚಾರಣೆಗೊಳಪಡಿಸಲಿದ್ದಾರೆ. 
 
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಟ್ನಾದ ಗಾಂಧಿ ಮೈದಾನದಲ್ಲಿ 2013ರ ಅ.27ರಂದು  ಪ್ರಚಾರ ರ್ಯಾಲಿ ನಡೆಸುತ್ತಿದ್ದ ಸಂಧರ್ಭದಲ್ಲಿ 10 ಬಾಂಬ್ ಸ್ಫೋಟಗೊಂಡಿದ್ದವು. ಈ ವೇಳೆ, ಐವರು ಮೃತಪಟ್ಟು 83 ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಎನ್‍ಐಎ ಅಧಿಕಾರಿಗಳು ಹಲವು ಆರೋಪಿಗಳನ್ನು ಬಂಧಿಸಿದ್ದರು.  
 
ಈ ಪೈಕಿ ಪ್ರಮುಖ ಆರೋಪಿಗಳಾದ ಉಮರ್ ಸಿದ್ದಿಕ್ಕಿ ಹಾಗೂ ಹೈದರ್ ಅಲಿ ಎಂಬುವರು ಪಾಟ್ನಾ ಬಾಂಬ್ ಸ್ಫೋಟ ಅಲ್ಲದೆ.  ಚರ್ಚ್‍ಸ್ಟ್ರೀಟ್ ಬಾಂಬ್ ಸ್ಫೋಟದ ರೂವಾರಿಯನ್ನೂ ಇವರೇ ವಹಿಸಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಅನುಮತಿ ಪಡೆದು ಕರೆತರಲಾಗುತ್ತಿದೆ. ಅಲ್ಲದೆ ಎರಡೂ ಪ್ರಕರಣಗಳಲ್ಲಿ ಸಾಮ್ಯತೆ ಕಂಡುಬರುತ್ತಿದೆ ಎನ್ನಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments