Select Your Language

Notifications

webdunia
webdunia
webdunia
webdunia

ಪಿಎಸ್‌ ಐ ನೇಮಕಾತಿ ಅಕ್ರಮ: ಕಾಂಗ್ರೆಸ್‌ ಮುಖಂಡನ ಬಂಧನ

ಪಿಎಸ್‌ ಐ ನೇಮಕಾತಿ ಅಕ್ರಮ: ಕಾಂಗ್ರೆಸ್‌ ಮುಖಂಡನ ಬಂಧನ
bengaluru , ಶುಕ್ರವಾರ, 22 ಏಪ್ರಿಲ್ 2022 (15:23 IST)

545 ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಪೊಲೀಸರು ಕಾಂಗ್ರೆಸ್‌ ಮುಖಂಡನನ್ನು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ನಡೆದ ಪಿಎಸ್‌ ಐ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಅಫ್ಜಲಪುರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್‌ ಪಾಟೀಲ್‌ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
ಮಹಾಂತೇಶ್‌ ಪಾಟೀಲ್‌ ಬ್ಲೂಟೂತ್‌ ಬಳಸಿ ಪರೀಕ್ಷೆ ಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದ್ದು, ಸಿಐಡಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದು, ಒಂದು ವಾರ ಕಳೆದರೂ ಅವರನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ : ಬೊಮ್ಮಾಯಿ