Webdunia - Bharat's app for daily news and videos

Install App

ದಕ್ಷ ಸಿಐಡಿ ಡಿಐಜಿ ಸೋನಿಯಾ ನಾರಂಗ್ ವರ್ಗಾವಣೆ

Webdunia
ಶನಿವಾರ, 30 ಏಪ್ರಿಲ್ 2016 (15:43 IST)
ದ್ವಿತಿಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆ ನಡೆಸುತ್ತಿದ್ದ ಸಿಐಡಿ ಡಿಐಜಿ ಸೋನಿಯಾ ನಾರಂಗ್‌ರನ್ನು ಕೇಂದ್ರದ ರಾಷ್ಟ್ರೀಯ ತನಿಖಾ ದಳಕ್ಕೆ ಎತ್ತಂಗಡಿ ಮಾಡಲಾಗಿದೆ.
 
ದಕ್ಷ ಐಪಿಎಸ್ ಅಧಿಕಾರಿಯಾಗಿದ್ದ ನಾರಂಗ್, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಪ್ರಕರಣದ ತನಿಖೆ ಮುಕ್ತಾಯದ ಹಂತದಲ್ಲಿರುವಾಗಲೇ ಅವರನ್ನು ಕೇಂದ್ರಕ್ಕೆ ವರ್ಗಾಯಿಸಿರುವುದು ರಾಜ್ಯದ ಜನತೆಯಲ್ಲಿ ಅಸಮಾಧಾನ ಮೂಡಿಸಿದೆ.
 
ಹಗರಣದಲ್ಲಿ ಅಧಿಕಾರಿಗಳು ರಾಜಕಾರಣಿಗಳು ಶಾಮೀಲಾಗಿದ್ದಾರೆ ಎನ್ನುವ ವರದಿಗಳು ಕೇಳಿ ಬಂದಿದ್ದು, ಅವರ ವರ್ಗಾವಣೆಯ ಹಿಂದೆ ಪ್ರಭಾವಿ ಶಕ್ತಿಗಳ ಕೈವಾಡವಿರಬಹುದೇ ಎನ್ನುವ ಸಂದೇಹ ಎಲ್ಲರನ್ನು ಕಾಡುತ್ತಿದೆ.
 
ಸಿಐಡಿ ಇಲಾಖೆಯ ಮತ್ತೊಬ್ಬ ಹಿರಿಯ ಮಹಿಳಾ ಅಧಿಕಾರಿಯೊಬ್ಬರೊಂದಿಗಿನ ಜಟಾಪಟಿ ವರ್ಗಾವಣೆಗೆ ಕಾರಣವಾಗಿದೆಯೇ ಎನ್ನುವ ಅನುಮಾನವು ತಲೆ ಎತ್ತಿ ನಿಂತಿದೆ.
 
ಆದರೆ, ಸೋನಿಯಾ ನಾರಂಗ್‌ರನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಮುಕ್ತಾಯಗೊಂಡ ನಂತರ ಕೇಂದ್ರಕ್ಕೆ ಕಳುಹಿಸಲಾಗುವುದು ಅಥವಾ ಅದಕ್ಕಿಂತ ಮೊದಲೇ ವರ್ಗಾವಣೆಯಾಗುವುದೋ ಎನ್ನುವುದನ್ನು ಕಾದು ನೋಡಬೇಕಾಗಿದೆ.  

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮಲೆ ಮಹದೇಶ್ವರ ಬೆಟ್ಟ: ಐದು ಹುಲಿಗಳ ಸಾವಿನ ಹಿಂದಿದೆ ಧ್ವೇಷದ ಕತೆ

ವಿಮಾನ ದುರಂತ: ತೀವ್ರವಾಗಿ ಮುಂದುವರೆದ ತನಿಖೆ

ಮುಂದಿನ ಸುದ್ದಿ
Show comments