Select Your Language

Notifications

webdunia
webdunia
webdunia
webdunia

ಚಲುವರಾಯಸ್ವಾಮಿಗೆ CID ಮಾಹಿತಿ ನೀಡುತ್ತಿದೆ

Chaluvarayaswamy
ಆರೋಪಿ ಸ್ಥಾನದಲ್ಲಿರುವ ಸಚಿವ ಚಲುವರಾಯಸ್ವಾಮಿಗೆ ಸಿಐಡಿ ಮಾಹಿತಿ ನೀಡುತ್ತಿದೆ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಸಚಿವರುಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ. ಕೃಷಿಸಚಿವ ಚಲುವಾರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆದಿದೆ. ಈ ಮೂಲಕ ಸರ್ಕಾರದಲ್ಲಿ ವರ್ಗಾವಣೆ ದಂಧೆ & ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೀತಿದೆ ಎಂಬುದು ಸಾಬೀತಾಗಿದೆ. ಪತ್ರ ನಕಲಿಯೋ ಅಸಲಿಯೋ ಆ ಮಾತು ಹಾಗಿರಲಿ. ಆದರೆ, ಕೃಷಿ ಇಲಾಖೆಯಲ್ಲಿ ಸುಲಿಗೆ ವರ್ಗಾವಣೆ ದಂಧೆ ನಡೆಯುತ್ತಿರುವುದು ಅಸಲಿ ಎನ್ನುವುದು ಗೊತ್ತಾಯಿತಲ್ಲ ಎಂದ್ರು. ಕೃಷಿ ಸಚಿವ ಚಲುವಾರಾಯಸ್ವಾಮಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

BBMP ಎಲ್ಲಾ ರೀತಿಯ ಚಿಕಿತ್ಸೆಗೂ ಸಿದ್ದವಿದೆ