Publish Date: Mon, 25 Apr 2022 (18:34 IST)
Updated Date: Mon, 25 Apr 2022 (18:39 IST)
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಈಗ ಸಿಐಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ...ಪೊಲೀಸರು ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ನೋಟಿಸ್ನಲ್ಲಿ 545 PSI ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ..ಪೊಲೀಸರು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದು, ವಿಚಾರಣೆಗೆ ತೆರಳುವ ಬಗ್ಗೆ ಖರ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.