Select Your Language

Notifications

webdunia
webdunia
webdunia
webdunia

ಸಿಟಿ ರವಿ ಮೆಂಟಲ್ ಗಿರಾಕಿ ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು : ಡಿಕೆಶಿ ತಿರುಗೇಟು

City Ravi Mental Giraki should be included in Nimhans
bangalore , ಭಾನುವಾರ, 26 ಮಾರ್ಚ್ 2023 (18:30 IST)
ಸಿ ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ ಎಂದು ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದ್ದಾರೆ.ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರು ಶಿವಕುಮಾರ್ ಮತ್ತು ಅವರ ಸಹೋದರ ಡಿ ಕೆ ಸುರೇಶ್ ಅವರ ಕುರಿತು ನೀಡಿರುವ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಆದರ ವಿಚಾರಣೆ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ವಿರುದ್ಧ ಕೈ ನಾಯಕರು ಕಿಡಿ..!