Publish Date: Mon, 27 Mar 2023 (15:00 IST)
Updated Date: Mon, 27 Mar 2023 (14:47 IST)
ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಅಚರಿಸಲಾಗ್ತಿದೆ.ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಅದ್ದೂರಿಯಾಗಿ ಪೌರ ಕಾರ್ಮಿಕರ ದಿನಾಚರಣೆ ಆಚರಿಸುತ್ತಿದ್ದು,ನಗರದ ಎಲ್ಲಾ ವಲಯದ ಪೌರ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ, ವೀರಗಾಸೆ, ಪಟ್ಟದ ಕುಣಿತ,ಪೂಜಾ ಕುಣಿತ, ತಮಟೆವಾದ್ಯ ಹಾಗೂ ಇನ್ನಿತರ ಕಲಾ ತಂಡಗಳಿಂದ ಮೆರವಣಿಗೆ ಮಾಡಲಾಗಿದೆ.ಹೂವಿನ ಪಲ್ಲಕ್ಕಿ ಯಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಿ ಮೆರವಣಿಗೆ ಮಾಡಲಾಗಿದ್ದು,ಪೌರ ಕಾರ್ಮಿಕರ ದಿನಾಚರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗಿಯಾಗಿದ್ದಾರೆ.ಬಿಬಿಎಂಪಿ ವಿಶೇಷ ಆಯುಕ್ತರು ಹಾಗೂ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ.