ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ ಭರ್ತಿ ಮಾಡುವ ಸಲುವಾಗಿ ಸೆ. 20 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ.
ಹೀಗಂತ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ತಿಳಿಸಿದ್ದಾರೆ.
ತುಮಕೂರು ನಗರದಲ್ಲಿ ಒಟ್ಟು 28 ವಿವಿಧ ಶಾಲಾ, ಕಾಲೇಜುಗಳಲ್ಲಿ ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.
ಅಭ್ಯರ್ಥಿಗಳು ಯಾವುದೇ ಪುಸ್ತಕಗಳನ್ನಾಗಲೀ, ಕೈಬರಹ ಚೀಟಿ, ಪೇಜರ್, ಕ್ಯಾಲ್ಕುಲೇಟರ್, ಇಯರ್ ಫೋನ್, ಮೊಬೈಲ್ ಫೋನ್, ಬೆಲೆಬಾಳುವ ವಸ್ತುಗಳನ್ನು ಪರೀಕ್ಷೆಗೆ ತರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆಗೆ ಒಂದು ಗಂಟೆ ಮುಂಚಿತವಾಗಿ ನಿಗದಿಪಡಿಸಿರುವ ಕಾಲೇಜಿನಲ್ಲಿ ಹಾಜರಿರಬೇಕು ಹಾಗೂ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕನ್ನು ಧರಿಸಬೇಕು ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ತಿಳಿಸಿದ್ದಾರೆ.