ಕಾರ್ಯಕರ್ತರು, ಮುಖಂಡರ ನಡುವೆ ಜಟಾಪಟಿ!

geetha
ಮಂಗಳವಾರ, 30 ಜನವರಿ 2024 (20:00 IST)
ಬೆಂಗಳೂರು :ಕೆ.ಆರ್‌. ನಗರದಿಂದ ಕಾರ್ಯಕರ್ತರಾಗಿ ನಿಗಮ ಮಂಡಳಿಗೆ ಆಯ್ಕೆಯಾಗಿದ್ದ ಐಶ್ವರ್ಯಾ ಮಹದೇವ್‌ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದಕ್ಕೆ ಶಾಸಕರ ತೀವ್ರ ವಿರೋಧವೇ ಕಾರಣವೆನ್ನಲಾಗಿದೆ. ಈ ಮುನ್ನ 34 ಅಭ್ಯರ್ಥಿಗಳ ಪಟ್ಟಿಯೊಂದನ್ನು ಸಿದ್ದಪಡಿಸಲಾಗಿತ್ತು. ಈ ಪಟ್ಟಿಯಲ್ಲಿ ಐಶ್ವರ್ಯ ಮಹದೇವ್‌ ಹೆಸರೂ ಸಹ ಸೇರ್ಪಡೆಯಾಗತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆ.ಆರ್‌.ನಗರ ಶಾಸಕ ರವಿಶಂಕರ್‌, ಐಶ್ವರ್ಯ ಮಹದೇವ್‌ ಹೆಸರು ಕೈಬಿಡದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು. 

 ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿ ಕಾಂಗ್ರೆಸ್‌ ಪಕ್ಷಕ್ಕೆ ಅಕ್ಷರಶಃ ಕಗ್ಗಂಟಾಗಿ ಪರಿಣಮಿಸಿದೆ. ಸಂಕ್ರಾಂತಿ ಹಬ್ಬದ ವೇಳೆಯಲ್ಲೇ ಬಿಡುಗಡೆಯಾಗ ಬೇಕಿದ್ದ ನಿಗಮ ಮಂಡಳಿ ಅಧ್ಯಕ್ಷರ ಮೊದಲ ಪಟ್ಟಿ ಇದುವರೆಗೂ ಬಿಡುಗಡೆಯಾಗದಿರಲು ಮುಖಂಡರು ಮತ್ತು ಕಾರ್ಯಕರ್ತರ ನಡುವಿನ ಗುದ್ದಾಟವೇ ಕಾರಣ ಎನ್ನಲಾಗಿದೆ. ಇದಕ್ಕೂ ಮುನ್ನ ಪಟ್ಟಿಯಲ್ಲಿ ಲಿಂಗಾಯಿತರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ ಎಂಬ ಆರೋಪವೂ ಮುಖಂಡರಿಂದ ಕೇಳಿಬಂದಿತ್ತು. ಬಳಿಕ ಪಟ್ಟಿ ಸಿದ್ದಪಡಿಸುವಾಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್‌ ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments