ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ನಡೆಸಲು ಇದ್ದ ತಡೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ತೆರವುಗೊಳಿಸಿದ್ದು, ಪರೀಕ್ಷೆ ನಡೆಸಲು ವಿವಿಗೆ ಅನುಮತಿಯನ್ನ ಹೈಕೋರ್ಟ್ ನೀಡಿದೆ.
ನ.15ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಪರೀಕ್ಷೆಗಳನ್ನು ನಡೆಸಲು ವಿವಿಗೆ ಸಮ್ಮತಿಸಿ ಮಧ್ಯಂತರ ಆದೇಶ ಹೊರಡಿಸಿದೆ.
ಇದರ ಜೊತೆಗೆ ನ್ಯಾಯಾಲಯದ ಅನುಮತಿ ಇಲ್ಲದೆ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು ಎಂದು ನಿರ್ದೇಶಿಸಿದೆ.