ಬೆಂಗಳೂರು: ಈಶಾನ್ಯ ಹಿಂಗಾರು ಮಳೆ ರಾಜ್ಯದಲ್ಲಿ ಚುರುಕಾಗಿದ್ದು, ಇನ್ನೂ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಿದೆ. ಕೆಲವೆಡೆ ಭಾರೀ ಮಳೆಯಾದ ವರದಿಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು-ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ , ಚಿತ್ರದುರ್ಗ, ಬೆಳಗಾವಿ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಜಿಟಿ ಜಿಟಿ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.