ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಿದ ಬೆನ್ನಲ್ಲೆ ಇದೀಗ 24 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 24 ಶಾಸಕರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರಕಾರಕ್ಕೆ ಒಂದು ವರ್ಷದ ತುಂಬಿದ ಸಂಭ್ರಮಾಚರಣೆಯಲ್ಲಿ ಬಿಜೆಪಿಯವರು ಇದ್ದಾರೆ.
ಈ ನಡುವೆ ನೂತನವಾಗಿ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ಘೋಷಣೆ ಮಾಡಿರುವುದು ಕಮಲ ಪಾಳೆಯದ ಶಾಸಕರಿಗೆ ಸಹಜವಾಗಿ ಸಂತಸ ತಂದಿದೆ.